ಉಡುಪಿ :ಮಾರ್ಚ್ 17: ಮುಖ್ಯ ಚುನಾವಣಾ ಆಯೋಗ 18ನೇ ಲೋಕಸಭಾ ಚುನಾವಣೆಗೆ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಅದೇ ರೀತಿಯಾಗಿ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲನೇ ಹಂತದ ಮತದಾನ ನಡೆಯಲಿದ್ದು ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ ಎಂದು ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ ಪ್ರಕಟಿಸಿದ್ದಾರೆ.
ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹಾಗಾದರೆ ಮೊದಲ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಏಪ್ರಿಲ್ 26, ಮೇ 7ರಂದು ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.
ಏಪ್ರಿಲ್ 26ಕ್ಕೆ ಎಲ್ಲೆಲ್ಲಿ ಮತದಾನ?
1) ಚಿತ್ರದುರ್ಗ
2) ಉಡುಪಿ-ಚಿಕ್ಕಮಗಳೂರು
3) ದಕ್ಷಿಣ ಕನ್ನಡ
4) ಹಾಸನ
5) ತುಮಕೂರು
6) ಚಿಕ್ಕಬಳ್ಳಾಪುರ
7) ಕೋಲಾರ
8) ಮಂಡ್ಯ
9) ಮೈಸೂರು-ಕೊಡಗು
10) ಚಾಮರಾಜನಗರ
11) ಬೆಂಗಳೂರು ಗ್ರಾಮಾಂತರ
12) ಬೆಂಗಳೂರು ದಕ್ಷಿಣ
13) ಬೆಂಗಳೂರು ಉತ್ತರ
14) ಬೆಂಗಳೂರು ಕೇಂದ್ರ
ಮೇ 7ರಂದು ಎಲ್ಲೆಲ್ಲಿ ಮತದಾನ?
1) ಬೆಳಗಾವಿ
2) ಬಳ್ಳಾರಿ
3) ಚಿಕ್ಕೋಡಿ
4) ಹಾವೇರಿ-ಗದಗ
5) ಕಲಬುರಗಿ
6) ಬೀದರ್
7) ಹುಬ್ಬಳಿ – ಧಾರವಾಡ
8) ಕೊಪ್ಪಳ
9) ರಾಯಚೂರು
10) ಉತ್ತರ ಕನ್ನಡ
11) ದಾವಣಗೆರೆ
12) ಶಿವಮೊಗ್ಗ
13) ಬಾಗಲಕೋಟೆ
14) ವಿಜಯಪುರ
ಕಾಸಿಗಾಗಿ ಸುದ್ದಿ ಮೇಲೆ ನಿಗಾ:
ಚುನಾವಣೆ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿ, ಪಕ್ಷದ ಪರವಾಗಿ ಮತದಾರರ ಮೇಲೆ ಪ್ರವ ಬೀರುವ ಸುದ್ದಿ ಪ್ರಕಟಣೆ, ಬಿತ್ತರಣೆ ಮಾಡುವ ಮಾಧ್ಯಮ ಸಂಸ್ಥೆಗಳ ಮೇಲೆ ನಿಗಾ ವಹಿಸಲು ಎಂ.ಸಿ.ಎಂ.ಸಿ. ಸಮಿತಿ ರಚಿಸಿಲಾಗಿದೆ. ವಿಶೇಷವಾಗಿ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಸೆಲ್ ಸಹ ರಚಿಸಲಾಗಿದೆ.
- ಹೋರ್ಡಿಂಗ್ಸ್,ಬಂಟಿಂಗ್ಸ್ ತೆರವಿಗೆ ಸೂಚನೆ:
ಚುನಾವಣೆ ಘೋಷಣೆಯಾಗಿರುವುದರಿಂದ ಸರ್ಕಾರಿ ಮತ್ತು ಖಾಸಗಿ ಹೆದ್ದಾರಿ ಫಲಕಗಳು ಮೇಲಿನ ಸರ್ಕಾರಿ ಯೋಜನೆಗಳ ಪ್ರಚಾರದ ಬಂಟಿಂಗ್ಸ್, ಬ್ಯಾನರ್ಸ್, ಭಿತ್ತಿಪತ್ರ, ಕಟೌಟ್ಸ್‍ಗಳನ್ನು ಕೂಡಲೆ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ.
- 85+ ಮತ್ತು ವಿಶೇಷಚೇತನರಿಗೆ ಮನೆಯಿಂದಲೆ ಮತದಾನಕ್ಕೆ ಅವಕಾಶ:
85 ವರ್ಷ ಮೇಲ್ಪಟ್ಟ ವಯೋವೃದ್ಧರು, ವಿಶೇಷ ಚೇತನರಿಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗದಿದ್ದಲ್ಲಿ ಅಂತಹ ಮತದಾರರ ಮನೆಗೆ 12ಡಿ ನಮೂನೆ ನೀಡಿ ಮನೆಯಿಂದಲೆ ಮತದಾನಕ್ಕೆ ಅವಕಾಶ ನೀಡಲಾಗಿದೆ.
- ಹೆಸರು ನೋಂದಣಿಗೆ ಇನ್ನು ಅವಕಾಶ:
ಇದೂವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿದವರು ನಾಮ ಪತ್ರ ಸಲ್ಲಿಕೆ ಕೊನೆ ದಿನಾಂಕದ 10 ದಿನಗಳ ಮುಂಚೆ ವರೆಗೂ ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಬಹುದಾಗಿದೆ.
- ಸಿ-ವಿಜಿಲ್‍ನಲ್ಲಿ ದೂರು ಕೊಡಿ:
ಚುನಾವಣಾ ಅಕ್ರಮ, ಎಂ.ಸಿ.ಸಿ. ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಏನೇ ದೂರುಗಳಿದಲ್ಲಿ ಸಿ-ವಿಜಿಲ್ ತಂತ್ರಾಂಶ ಮತ್ತು 1950 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ. ವಿವಿಧ ತಂಡಗಳು ತಪಾಸಣೆ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಹಣ, ಇತರೆ ಬೆಲೆ ಬಾಳುವ ವಸ್ತುಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ನೇತೃತ್ವದಲ್ಲಿ ಕ್ಯಾಶ್ ರಿಡ್ರೆಸಲ್ ಸಮಿತಿ ರಚಿಸಲಾಗಿದೆ.