ಬೆಂಗಳೂರು:ಮಾರ್ಚ್ 17: ದೇಶದ ಹಲವು ರಾಜ್ಯಗಳಲ್ಲಿ ಹವಾಮಾನದ ಪರಿಸ್ಥಿತಿ ನಿರಂತರವಾಗಿ ಬದಲಾಗುತ್ತಿದೆ. ಮಾರ್ಚ್ 22ರಿಂದ ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ