ಉಡುಪಿ : ಮಾರ್ಚ್ .17: ಉಡುಪಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಆಗಿ ಡಾ. ಅಶೋಕ್ ಎಚ್. ಅಧಿಕಾರ ಸ್ವೀಕರಿಸಿದ್ದಾರೆ
ಇವರು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು
ಬಳಿಕ ಸುರತ್ಕಲ್ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ, ದ.ಕ. ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿಯಾಗಿ ನಂತರ ಹೆಬ್ರಿಯಲ್ಲಿ ಮೆಡಿಕಲ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
2012ರ ಅತ್ಯುತ್ತಮ ಡಿಎಪಿಸಿಓ ಅಧಿಕಾರಿಯಾಗಿ, 2013ರಲ್ಲಿ ಉಡುಪಿ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ, 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಇವರು ಭಾಜನರಾಗಿದ್ದರು.
ಉಡುಪಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಆಗಿ ಡಾ. ಅಶೋಕ್ ಎಚ್. ಅಧಿಕಾರ ಸ್ವೀಕರಿಸಿದ್ದಾರೆ.