ಬೆಂಗಳೂರು : ಮಾರ್ಚ್ 18:ರಾಬರ್ಟ್ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು ಅಪಘಾತವಾಗಿದೆ.
ಗಾಯಕಿ ಮಂಗ್ಳಿ ರಂಗಾ ರೆಡ್ಡಿ ಜಿಲ್ಲೆಯ ನಂದಿಗಮಾ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಭಾಗಿಯಾಗಿದ್ದರು. ಅಲ್ಲಿಂದ ಹಿಂತಿರುವ ವೇಳೆ ಅವರ ಕಾರು ಅಪಘಾತವಾಗಿದೆ. ಶಂಶಾಬಾದ್ ತೊಂಡುಪಲ್ಲಿ ಬಳಿಕ ಟ್ರಕ್ವೊಂದು ಅವರ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ
ಕಾರಿನಲ್ಲಿ ಮಂಗ್ಳಿ, ಮೇಘರಾಜ್, ಮನೋಹರ್ ಪ್ರಯಾಣಿಸುತ್ತಿದ್ದ. ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ
ಇನ್ನು ಟ್ರಕ್ ಚಾಲಕ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಎಂದು ತಿಳಿದುಬಂದಿದೆ.
.