ಥಿಂಪು ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು ಸ್ವೀಕರಿಸಿದ್ದು, ಈ ಗೌರವವನ್ನು ಪಡೆದ ಮೊದಲ ಭೂತನ್ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪ್ರಧಾನಿ ಮೋದಿ ಭೂತಾನ್‌ನ ಪ್ರತಿಷ್ಠಿತ ನಾಗರಿಕ ಗೌರವವನ್ನು ಪಡೆದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಉಭಯ ನಾಯಕರು ರಾಜಧಾನಿಯಲ್ಲಿ ಭೇಟಿಯಾದ ನಂತರ ಭೂತಾನ್‌ನ ರಾಜ ಜಿಗ್ಮೆ ಅವರು ಪಿಎಂ ಮೋದಿಯವರಿಗೆ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಪ್ರಶಸ್ತಿಯನ್ನು ನೀಡಿದರು.
ಸ್ಥಾಪಿತವಾದ ಶ್ರೇಯಾಂಕ ಮತ್ತು ಪ್ರಾಶಸ್ತ್ಯದ ಪ್ರಕಾರ, ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ ಅನ್ನು ಜೀವಮಾನದ ಸಾಧನೆಗಾಗಿ ನೀಡುವ ಪ್ರಶಸ್ತಿಯಾಗಿ ಸ್ಥಾಪಿಸಲಾಯಿತು. ಇದು ಭೂತಾನ್‌ನಲ್ಲಿ ಅತ್ಯುನ್ನತ ಗೌರವವಾಗಿದೆ.