ಉಡುಪಿ:ಮಾರ್ಚ್ 23: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಮಂಡಲೋತ್ಸವ ಪೂರೈಸಿ ಪುರ ಪ್ರವೇಶಿಸಿದ ಪೇಜಾವರ ಶ್ರೀ ವಿಶ್ವಪ್ರಸನ್ನ ಶ್ರೀಪಾದರಿಗೆ ಗುರುವಂದನೆ ಕಾರ್ಯಕ್ರಮವನ್ನು ಮಾರ್ಚ್ 23 ಶನಿವಾರದಂದು ಸಂಜೆ 3.30ಕ್ಕೆ ಆಯೋಜಿಸಲಾಗಿದೆ.
ಉಡುಪಿಯ ಶ್ರೀ ಪೂರ್ಣಪ್ರಜ್ಞ ಅಡಿಟೋರಿಯಂನಲ್ಲಿ ಕಾರ್ಯಕ್ರಮ ನಡೆಯಲಿದ್ದು ಶ್ರೀ ಕೃಷ್ಣ ಸೇವಾ ಬಳಗ ಮತ್ತು ಶ್ರೀ ಅದಮಾರು ಮಠದ ವತಿಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ
ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಅನುಗ್ರಹದೊಂದಿಗೆ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಬಳಿಕ ಪೇಜಾವರ ಶ್ರೀಗಳು ಅಯೋಧ್ಯೆಯ ಶ್ರೀರಾಮನ ಮಂತ್ರಾಕ್ಷತೆಯನ್ನು ವಿತರಿಸಲಾಗುವುದು ಎಂದು ತಿಳಿಸಲಾಗಿದೆ