ಬೆಂಗಳೂರು :ಮಾರ್ಚ್ 29: ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ ಮುಖ್ಯ ಆರೋಪಿಯನ್ನು ಬಂಧಿಸಲಾಗಿದೆ. ರಾಮೇಶ್ವರಂ ಕೆಫ್ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಎನ್ನುವಾತನನ್ನು ಮಾರ್ಚ್ 28 ರಂದು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಈ ಬಗ್ಗೆ ಎನ್‌ಐಎ ಟ್ವೀಟ್ ಮಾಡಿದ್ದು, ಪ್ರಮುಖ ಆರೋಪಿಯ ಬಂಧನದ ಬಗ್ಗೆ ಖಚಿತಪಡಿಸಿದೆ
ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ಮಾಡಿದ ನಂತರ ಮುಜಾಮಿಲ್ ಶರೀಫ್ ನನ್ನು ಬಂಧಿಸಲಾಗಿದೆ ಎಂದು ಎನ್ಐ ಟ್ವೀಟ್ನಲ್ಲಿ ತಿಳಿಸಿದೆ. ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್ ಶರೀಫ್ ಕೀ ಕಾಂನ್ಸಪರೇಟರ್ ಆಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಇನ್ನು ಬಂಧನದ ವೇಳೆ ಈತನ ಬಳಿ ಇದ್ದ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ.