ಉತ್ತರಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ…!!
ದೆಹಲಿ, ಮಾರ್ಚ್ 29: ಉತ್ತರಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ನಿಧಾನರಾಗಿದ್ದಾರೆ . ಜೈಲಿನಲ್ಲಿದ್ದ ಡಾನ್ ಮುಖ್ತಾರ್ ಅನ್ಸಾರಿಗೆ ಹೃದಯಾಘಾತವಾಗಿತ್ತು. ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 8 ಪ್ರಕರಣಗಳಲ್ಲಿ ಮುಖ್ತಾರ್ ಅನ್ಸಾರಿ ಶಿಕ್ಷೆ ಅನುಭವಿಸುತ್ತಿದ್ದರು. ಮುಖ್ತಾರ್ ಅವರ ನಿಧನದ ಬಳಿಕ ಘಾಜಿಪುರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಜೊತೆಗೆ ಇತರೆ ಸೂಕ್ಷ್ಮ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಆದೇಶಿಸಲಾಗಿದೆ.