ಬೆಂಗಳೂರು: ಏಪ್ರಿಲ್ 01:ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ
ಬೆಂಗಳೂರಿನಲ್ಲಿರುವ ವೈದೇಹಿ ಆಸ್ಪತ್ರೆಯಲ್ಲಿ ಶಿವಣ್ಣಾ ಅವರನ್ನು ಚಿಕಿತ್ಸೆಗೆಂದು ದಾಖಲಿಸಲಾಗಿದೆ. ವೈದ್ಯರು ಈಗಾಗಲೇ ಆರೋಗ್ಯ ತಪಾಸಣೆ ಮಾಡಿದ್ದು ಸಂಜೆ ಹೊತ್ತಿಗೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಂಡಿರುವ ಗೀತಾ ಶಿವರಾಜ್ಕುಮಾರ್ ಶಿವಮೊಗ್ಗದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಪ್ರಚಾರಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಗೀತಾ ಶಿವರಾಜ್ಕುಮಾರ್, ಈ ಬಾರಿ ಗೆದ್ದೆ ಗೆಲ್ಲಲು ಶಿವರಾಜಕುಮಾರ್ ಅವರನ್ನು ತಮ್ಮೊಂದಿಗೆ ಪ್ರಚಾರಕ್ಕೆ ಕರೆದುಕೊಂಡು ಹೋಗುತ್ತಿದ್ದರು. ತೀವ್ರ ಬಿಸಿಲು ಓಡಾಟ ಹೆಚ್ಚಾದ್ದರಿಂದ ಶಿವಣ್ಣ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.