ಉಡುಪಿ :ಏಪ್ರಿಲ್ 02: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇಮಕ ಮಾಡಿದ್ದಾರೆ.
ಏಪ್ರಿಲ್ 01 ರಂದು ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕಾತಿ ಮಾಡಲಾಗಿದ್ದು, ಇತ್ತೀಚೆಗಷ್ಟೇ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಅವರನ್ನು ನೇಮಿಸಲಾಗಿತ್ತು.ಕಾಂಗ್ರೆಸ್ ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು, ಪಕ್ಷದಲ್ಲಿ ಹಲವು ವರ್ಷಗಳಿಂದ ಸಾಕಷ್ಟು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.