ಪುತ್ತೂರು:ಏಪ್ರಿಲ್ 02 : ಗೃಹೋಪಯೋಗಿ ಹಾಗೂ ಎಲೆಕ್ಟ್ರಾನಿಕ್ಸ್ ಸಂಸ್ಥೆಯೊಂದರ ಪುತ್ತೂರಿನ ದರ್ಬೆ ಗೋದಾಮಿನಲ್ಲಿ ಅಗ್ನಿ ಆಕಸ್ಮಿಕದಿಂದ ಸುಮಾರು 2 ಕೋಟಿ ಮೌಲ್ಯದ ವಸ್ತುಗಳ ಬೆಂಕಿಗೆ ಆಹುತಿಯಾದ ಘಟನೆ ಇಂದು ಏಪ್ರಿಲ್ 02ರಂದು ಸಂಭವಿಸಿದೆ.
ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ ಉರಿದಿವೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಅವರಿಗೆ ಪುತ್ತೂರು ನಗರ ಠಾಣಾ ಪೊಲೀಸರು ಸಾಥ್ ನೀಡಿದ್ದಾರೆ.