ಬೆಂಗಳೂರು:ಏಪ್ರಿಲ್ 05:ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೊಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 09 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ.
ಮತದಾರರೇ ನೇರವಾಗಿ http://www.nvsp.in ಮತ್ತು http://voterportal.eci.gov.in ಹಾಗೂ voter Helpline App ಗಳ ಮೂಲಕ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.