ಬೆಳ್ತಂಗಡಿ:ಏಪ್ರಿಲ್ 04: ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು ಗ್ರಾಮದ ಅಲಡ್ಕದಲ್ಲಿ ನಡೆದಿದ್ದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ದಿನೇಶ್ ಗೌಡ(10), ಪುದುವೆಟ್ಟು ಗ್ರಾಮದ ಮೋಹನ್ (28), ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೆಲ್ಯಾಡಿ ನಿವಾಸಿ ಜಯ ಸುವರ್ಣ(39), ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹರೆಹಳ್ಳಿಯ ನಿವಾಸಿ ದಿನೇಶ್ (10), ಕಡಬ ತಾಲೂಕಿನ ಕಾರ್ತಿಕ್(28) ಬಂಧಿತ ಆರೋಪಿಗಳು, ಆರೋಪಿಗಳನ್ನು ನೆಲ್ಯಾಡಿಯಲ್ಲಿ ವಶಕ್ಕೆ ಪಡೆಯಲಾಗಿದ್ದು ಏ.4 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.