ಬೆಂಗಳೂರು:ಏಪ್ರಿಲ್ 05:ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ.
ಯುಗಾದಿ ಹಬ್ಬ ಹಾಗೂ ಸಾಲು ರಜೆಗಳ ಕಾರಣ ಊರಿಗೆ ತೆರಳುವವರಿಗೆ ಹಾಗೂ ಪ್ರವಾಸ ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಈ ಕ್ರಮಕ್ಕೆ ಮುಂದಾಗಿದೆ. ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ನಿಗಮಗಳು ವಿಶೇಷ ಬಸ್‌ಗಳು ಕಾರ್ಯಾಚರಣೆಗೆ ಸಜ್ಜಾಗಿವೆ.