ಬೆಂಗಳೂರು:ಏಪ್ರಿಲ್ 07: ರಾಜ್ಯದಲ್ಲಿ ಕಾಲರಾ ಅಬ್ಬರ ಹೆಚ್ಚಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ ಮತ್ತೊಬ್ಬರಿಗೆ ಕಾಲರಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕಾಲರಾ ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.
ವಾಂತಿ, ಭೇದಿ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಕಾರು ಚಾಲಕನ ಕಲ್ಚರಲ್ ವರದಿಯಲ್ಲಿ ಕಾಲರಾ ಸೋಂಕು ಇರುವುದು ದೃಢಪಟ್ಟಿದೆ.
ಬೆಂಗಳೂರಿನಲ್ಲಿ ನಿನ್ನೆಯಷ್ಟೇ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳಿಗೆ ಕಾಲರಾ ಸೋಂಕು ದೃಢಪಟ್ಟಿದ್ದು, ಇದೀಗ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳು, ರಾಮನಗರ ಜಿಲ್ಲೆಯಲ್ಲಿ ಒಂದು ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಈವರೆಗೆ ಕಾಲರಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.