ಸುಬ್ರಹ್ಮಣ್ಯ :ಏಪ್ರಿಲ್ 07:ದೇವಾಲಯವು ರಾಜ್ಯದ ನಂಬರ್ ಒನ್ ಶ್ರೀಮಂತ ದೇವಾಲಯವಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಈ ದೇವಾಲಯದ ಗಳಿಕೆಯಲ್ಲಿ ಭಾರೀ ಏರಿಕೆಯಾಗಿದೆ.
ಕಳೆದ ಆರ್ಥಿಕ ವರ್ಷದ ಅಂದರೆ 2023-24ರಲ್ಲಿ ಅತಿಹೆಚ್ಚು ಗಳಿಕೆ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿಯನ್ನು ಇಲಾಖೆಯ ಆಯುಕ್ತರು ಬಿಡುಗಡೆಗೊಳಿಸಿದ್ದಾರೆ. ಅದರಂತೆಯೇ, ಕುಕ್ಕೆ ದೇವಾಲಯ ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ.
ಸತತವಾಗಿ ಹದಿಮೂರು ವರ್ಷವೂ ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲೂಕಿನ ಪ್ರಸಿದ್ದ ನಾಗರಾಧಾನೆಯ ಸನ್ನಿಧಿ ಕುಕ್ಕೆ ಸುಬ್ರಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯವಿದೆ