ಬೆಂಗಳೂರು: ಏಪ್ರಿಲ್ 13:ಲೋಕಸಭಾ ಚುನಾವಣೆ ವೇಳೆ 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಹಾಗೂ ಅಂಗವಿಕಲ ಮತದಾರರಿಗೆ ಶನಿವಾರದಿಂದ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಒಟ್ಟು 49,648 ಮತದಾರರು ನೋಂದಾಯಿಸಿಕೊಂಡಿದ್ದಾರೆ.
ಇಂದಿನಿಂದ ಏಪ್ರಿಲ್ 18ರವರಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮನೆಯಿಂದ ಮತದಾನ ಮಾಡಲು ಈಗಾಗಲೇ ನೋಂದಾಯಿಸಿಕೊಂಡವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಚುನಾವಣಾ ಸಿಬ್ಬಂದ ಮನೆಗಳಿಗೆ ತೆರಳಿ ಬ್ಯಾಲೆಟ್ ಪೇಪರ್ ಮೂಲಕ ಗೌಪ್ಯ ಮತದಾನ ಮಾಡಿಸುತ್ತಾರೆ.
ಕಳೆದ ಚುನಾವಣೆ ವೇಳೆ ಕರ್ನಾಟಕ ರಾಜ್ಯವು ಮೊಟ್ಟ ಬಾರಿಗೆ 80 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಮನೆಯಿಂಜಲೇ ಮತದಾನ ಮಾಡುವ ಅವಕಾಶ ಕಲ್ಪಿಸಿತ್ತು. ಇದನ್ನು ಲೋಕಸಭಾ ಚುನಾವಣೆಯಲ್ಲಿ ದೇಶದಾದ್ಯಂತ ವಿಸ್ತರಣ ಮಾಡಲಾಗಿದ್ದು, 85 ವರ್ಷಕ್ಕೆ ಹೆಚ್ಚಿಸಲಾಗಿದೆ.
ರಾಜ್ಯದಲ್ಲಿ ಒಟ್ಟು 3,40,856 ಮತದಾರರು 85 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದು, 36,691 ಮತದಾರರು ಮನೆಯಿಂದಲೇ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದಾರೆ. ಇನ್ನು ಅಂಗವಿಕಲ ಮತದಾರರು ರಾಜ್ಯದಲ್ಲಿ ಒಟ್ಟು 2,76,042 ಇದ್ದು, ಈ ಪೈಕಿ ಮನೆಯಿಂದಲೇ ಮತದಾನ ಮಾಡಲು 12,957 ಮತದಾರರು ನೋಂದಾಯಿಸಿಕೊಂಡಿದ್ದಾರೆ.
ಒಟ್ಟು 49,648 ರಷ್ಟು 85 ವರ್ಷಕ್ಕಿಂತ ಮೇಲ್ಪಟ್ಟು ಮತ್ತು ಅಂಗವಿಕಲ ಮತದಾರರಾಗಿದ್ದಾರೆ. ಮತದಾನದ ವೇಳೆ ಕೈಗೊಳ್ಳುವ ಕ್ರಮಗಳನ್ನೇ ಮಾಡಲಾಗುತ್ತದೆ. ಮನೆಯಲ್ಲಿಯೇ ಗೌಪ್ಯ ಮತದಾನದ ವ್ಯವಸ್ಥೆ ಮಾಡಿಕೊಂಡು ಮತಚಲಾಯಿಸಲು ಅವಕಾಶ ನೀಡಲಾಗುತ್ತದೆ.