ಬೆಂಗಳೂರು :ಏಪ್ರಿಲ್ .14: ಕನ್ನಡ ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್‌ನಲ್ಲಿರುವ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರದಲ್ಲಿ ಈ ಸಾವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ
ಚಿತ್ರ ನಿರ್ಮಾಣದ ಜೊತೆಗೆ ಉದ್ಯಮಿ, ಬಿಲ್ಡರ್ ಕೂಡ ಆಗಿರುವ ಸೌಂದರ್ಯ ಜಗದೀಶ್ ಸುದೀಪ್ ನಟನೆಯ ಮಸ್ತ್ ಮಜಾ ಮಾಡಿ, ಅಪ್ಪು ಮತ್ತು ಪಪ್ಪು, ರಾಮ್‌ಲೀಲಾ, ಸ್ನೇಹಿತರು ಮುಂತಾದ ಜನಪ್ರಿಯ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಅವರ ಮಗಳ ಮದುವೆಯನ್ನು ನೆರವೇರಿಸಿದ್ದರು.
ಇತ್ತೀಚೆಗೆ ಇವರ ಒಡೆತನದ ಜೆಟ್ಲಾಗ್ ನಲ್ಲಿ ತಡರಾತ್ರಿ ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿ ಪ್ರಕರಣ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಈ ವಿವಾದದ ಬಳಿಕ ಜೆಟ್ಲಾಗ್ ರಸ್ಟೋ ಬಾರ್ ಲೈಸನ್ಸ್ 25 ದಿನಗಳ ರದ್ದು ಮಾಡಲಾಗಿತ್ತು. ಪತ್ನಿ ರೇಖಾ ಜಗದೀಶ್ ಈ ಬಾರ್‌ನ ಸಂಸ್ಥಾಪಕರು ಮತ್ತು ಡೈರೆಕ್ಟರ್ ಆಗಿದ್ದಾರೆ. ಅವರ ಮೇಲೂ ಪ್ರಕರಣ ದಾಖಲಾಗಿತ್ತು.
ಮೃತ ಸೌಂದರ್ಯ ಜಗದೀಶ್ ಅವರು ಪತ್ನಿ ರೇಖಾ ಜಗದೀಶ್ ಮಗ ನಟ ಸ್ನೇಹಿತ್, ಓರ್ವ ಪುತ್ರಿ ಸೇರಿ ಅಪಾರ ಬಂಧು ಬಳಗದವರನ್ನು, ಚಿತ್ರರಂಗದ ಸ್ನೇಹಿತರನ್ನು ಅಗಲಿದ್ದಾರೆ.