ಉಡುಪಿ : ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಒಂದು ಭಾಗದ ಅಂಡರ್ ಪಾಸ್ ಕಾಮಗಾರಿ ಪೂರ್ಣ ಗೊಂಡ ಹಿನ್ನೆಲೆಯಲ್ಲಿ ನಾಳೆಯಿಂದ( ಏಪ್ರಿಲ್ 17) ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಈ ಹಿಂದಿನ ರಾಷ್ಟೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಸಂತೆಕಟ್ಟೆಯಲ್ಲಿ ನಿತ್ಯ ವಾಹನ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಹೆಚ್ಚಾಗಿದ್ದು ಈ ಮಾರ್ಗ ವಾಗಿ ವಾಹನ ಸಂಚಾರ ಕಷ್ಟಕರವಾಗಿತ್ತು
ಇದೀಗ ಅಂಡರ್ ಪಾಸ್ ರಸ್ತೆಯ ಒಂದು ಬಾಗ ಪೂರ್ಣ ಗೊಂಡಿದ್ದರಿಂದ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಸಮಸ್ಯೆ ಪರಿಹಾರವಾಗಲಿದೆ
ಶೀಘ್ರದಲ್ಲೇ ಇನ್ನೊಂದು ಭಾಗದ ಕಾಮಗಾರಿ ಕೂಡ ಪ್ರಾರಂಭಗೊಳ್ಳಲಿದೆ ಎಂದು ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.