ಉಡುಪಿ: ಏಪ್ರಿಲ್ 17:ಎ. 24ರಂದು ಉಡುಪಿ ನಗರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ.ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ತಿಳಿಸಿದರು.
ಮಂಗಳವಾರ ಕಡಿಯಾಳಿಯ ಬಿಜೆಪಿ ಮಾಧ್ಯಮ ಕೇಂದ್ರದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು , ಯೋಗಿ ಆದಿತ್ಯನಾಥ್ ಅಂತಿಮ ಹಂತದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ತಮಿಳುನಾಡು ಬಿಜೆಪಿ ಮುಖಂಡ ಅಣ್ಣಾಮಲೈ ಕೂಡ ಏ. 22ರಂದು ಉಡುಪಿ ಹಾಗೂ ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದರು.
ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರು ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ ಎಂದರು