ಉಡುಪಿ, ಏಪ್ರಿಲ್ 18: ದ್ವಿಚಕ್ರ ವಾಹನ ಸವಾರರೊಬ್ಬರು ಎದುರಿನಿಂದ ಬಂದ ಲಾರಿಯಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಹೇರೂರು ಮೂಲದ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದೆ
ಕೃಷ್ಣ ತನ್ನ ದ್ವಿಚಕ್ರ ವಾಹನದಲ್ಲಿ ಸಂತೆಕಟ್ಟೆಯಿಂದ ಬ್ರಹ್ಮಾವರ ಕಡೆಗೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಏಕಪಥದಲ್ಲಿ ಸಂಚಾರ ವ್ಯವಸ್ಥೆ ಮಾಡಲಾಗಿದ್ದು, ಕೃಷ್ಣಾ ಎದುರುಗಡೆಯಿಂದ ಬರುತ್ತಿದ್ದ ಲಾರಿಯಡಿಗೆ ಸಿಲುಕಿದ್ದಾರೆ.
ಕೃಷ್ಣ ಅವರು ಉಡುಪಿ ನಗರ ಪಾಲಿಕೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು.