ಉಡುಪಿ:ಏಪ್ರಿಲ್ 19: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಇಂದು ಶುಕ್ರವಾರ ನಡೆದಿದೆ.
ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಬಿದ್ದಿದೆ.
ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ. ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯ ರಸ್ತೆಗೆ ಬರುತಿದ್ದರು ಎನ್ನಲಾಗಿದೆ