ಚಿಕ್ಕಮಗಳೂರು, ಏಪ್ರಿಲ್ 22: ನಗರದ IG ರಸ್ತೆಯ ಸಾರಗೋಡು ಆರ್ಕೆಡ್ನಲ್ಲಿರುವ ಕರ್ನಾಟಕ ಬ್ಯಾಂಕ್ನ ಶಾಖೆಯ ಕೆಳಭಾಗದಲ್ಲಿರುವ ಎಟಿಎಂಗೆ ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮವಾಗಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಎಟಿಎಂಗೆ ಬೆಂಕಿ ಹೊತ್ತಿಕೊಂಡ ವಿಚಾರವನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್ ಅಗ್ನಿಶಾಮಕ ದಳಕ್ಕೆ ತಿಳಿಸಿದೆ.
ಮಾಹಿತಿ ಬಂದ ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.