ಮಂಗಳೂರು :ಏಪ್ರಿಲ್ 28:ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ ಹೋಟೆಲ್ ಶ್ರೀ ದ್ವಾರ ಬಳಿ ನಡೆದಿದೆ.
ಅಪಘಾತದ ರಭಸಕ್ಕೆ ಒಂದು ಲಾರಿ ಪಕ್ಕದ ಗ್ರಾನೈಟ್ ಮಳಿಗೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಗ್ರಾನೆಟ್ ಗೆ ಹಾನಿಯಾಗಿದೆ. ಮಂಗಳೂರಿನಿಂದ ಮಲ್ಪೆಗೆ ಮೀನು ಸಾಗಾಟ ಮಾಡುತ್ತಿದ್ದ ಮತ್ತೊಂದು ಹಳೆಯ ಲಾರಿ ಸಂಪೂರ್ಣ ಹಾನಿಗೀಡಾಗಿದೆ. ಚಾಲಕನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭಾಗದಲ್ಲಿ ಮಹಿಳಾ ಮೀನುಗಾರರು ನಿತ್ಯ ಮೀನು ಮಾರಾಟಕ್ಕೆ ಕುಳಿತುಕೊಳ್ಳುತ್ತಿದ್ದು, ಅಪಘಾತ ಸಂದರ್ಭದಲ್ಲಿ ಇಲ್ಲದ್ದರಿಂದ ಭಾರಿ ಅಪಾಯವೊಂದು ತಪ್ಪಿದಂತಾಗಿದೆ.