ಉಡುಪಿ :ಮೇ 04:ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು ಎತ್ತರ ಪ್ರದೇಶಗಳಿಗೆ ನಿರಂತರ ಹಾಗೂ ವ್ಯವಸ್ಥಿತವಾಗಿ ಪೂರೈಸುವ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಲಾಯಿತು.
ಪ್ರತಿ ವರ್ಷದಂತೆ ಬೇಸಿಗೆಯ ಕೊನೆಯ ಅವಧಿಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿ ಹಾಗೂ ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಸುತ್ತಿದ್ದ ಬಜೆ ಅಣೆಕಟ್ಟಿನಲ್ಲಿ ನೀರು ಬತ್ತಿ ಹೋಗುತ್ತಿರುವುದರಿಂದ ಕುಡಿಯುವ ನೀರಿನ ಹಾಹಾಕಾರ ಎಲ್ಲೆಡೆ ಕೇಳಿ ಬರುತ್ತಿದ್ದು ಇದನ್ನು ಮನಗಂಡು ಕುಡಿಯುವ ನೀರಿನ ಸರಬರಾಜನ್ನು ಎತ್ತರ ಪ್ರದೇಶಗಳಿಗೆ ನಿರಂತರ ಹಾಗೂ ವ್ಯವಸ್ಥಿತ ವಾಗಿ ಪೂರೈಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಜರಗಿಸಬೇಕು ಎಂದು ನಿಯೋಗ ಆಗ್ರಹಿಸಿದೆ.