ಕಾರ್ಕಳ : ಮೇ 09:ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಾಗಿದೆ.
ಪರೀಕ್ಷೆಗೆ ಹಾಜರಾಗಿದ್ದ 39 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 09 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 13ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ಹಾಗೂ 07 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಶಾಲಾ ಆಡಳಿತ ಮಂಡಳಿ , ಕಾಲೇಜಿನ ಪ್ರಾಚಾರ್ಯರು , ಪ್ರಾಧ್ಯಾಪಕರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.