ನವದೆಹಲಿ : ಮೇ.10 :ತೆಲುಗು ಚಿತ್ರರಂಗದ ಮೆಗಾಸ್ಟಾರ್ ಜಿರಂಜೀವಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಪ್ರಶಸ್ತಿ ಪದ್ಮ ವಿಭೂಷಣ ಲಭಿಸಿದೆ.
ಚಿರಂಜೀವಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮ ವಿಭೂಷಣ ಪ್ರಶಸ್ತಿ ಪ್ರಧಾನ ಆಗಿದೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಆಧರಿಸಿ ಈ ಅವಾರ್ಡ್ ನೀಡಲಾಗಿದೆ. ದೆಹಲಿಯಲ್ಲಿ ಗುರುವಾರ (ಮೇ 9) ನಡೆದ ಕಾರ್ಯಕ್ರಮದಲ್ಲಿ ಚಿರಂಜೀವಿ ಅವರು ಈ ಪ್ರಶಸ್ತಿಯನ್ನು ಪಡೆದರು.
ಈ ಕ್ಷಣ ಅವರ ಕುಟುಂಬದವರಿಗೆ, ಆಪ್ತರಿಗೆ ಹಾಗೂ ಅಭಿಮಾನಿಗಳಿಗೆ ಹೆಮ್ಮೆಯ ಕ್ಷಣ ಆಗಿತ್ತು. ಈ ವಿಡಿಯೋಗಳನ್ನು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಚಿರಂಜೀವಿ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ