ತೀರ್ಥಹಳ್ಳಿ : ಮೇ 11:ಹೋಟೆಲ್ ಮಂದಾರ್ತಿ ಗ್ರಾಂಡ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಆಗುಂಬೆ ಬಳಿ ನಡೆದಿದೆ
ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಎಂಬಾತ ಕ್ಯಾಂಟರ್ ಒಳಗೆ ಮಲಗಿದ್ದರು. ಈ ವೇಳೆ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಲ್ಮಾನ್ ಸ್ಥಳದಲ್ಲೇ ಪ್ರಾಣ ಬಿಟ್ಟರೆ ಡ್ರೈವರ್ ಗೆ ಗಂಭೀರ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ಆಗುಂಬೆಯಿಂದ ತೀರ್ಥಹಳ್ಳಿಗೆ ಕ್ಯಾಂಟರ್ ಬರುವ ವೇಳೆ ಈ ದುರ್ಘಟನೆ ನಡೆದಿದೆ. ಕ್ಯಾಂಟರ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಲ್ಮಾನ್ ಮೃತದೇಹ ತೀರ್ಥಹಳ್ಳಿಯ ಶವಾಗಾರದಲ್ಲಿ ಇರಿಸಲಾಗಿದ್ದು ತೀರ್ಥಹಳ್ಳಿ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.