ಉಡುಪಿ: ಮೇ 12 :ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ.
ಸಾವನ್ನಪ್ಪಿದ ಕೈದಿ ಅನುಪ್ ಶೆಟ್ಟಿ (38) ಎಂದು ತಿಳಿದು ಬಂದಿದೆ. ಅನೂಪ್ ಗೆ ಎದೆನೋವು ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದರೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮಾರ್ಗ ಮಧ್ಯ ಸಾವು ಸಂಭವಿಸಿದೆ ಎಂದು ವರದಿಯಾಗಿದೆ
ಕುಂದಾಪುರದ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ ಕೊಲೆ ಆರೋಪ ಎದುರಿಸುತ್ತಿದ್ದ ಅನೂಪ್ ಶೆಟ್ಟಿ, ಎರಡೂವರೆ ವರ್ಷಗಳಿಂದ ವಿಚಾರಣಾಧೀನ ಖೈದಿಯಾಗಿದ್ದ ಎನ್ನಲಾಗಿದೆ