ಮಂಗಳೂರು :ಮೇ 12: ಈ ಬಾರಿಯ 10ನೇ ತರಗತಿಯ ಪರೀಕ್ಷೆಯ ಫಲಿತಾಂಶ ದಲ್ಲಿ 625ಕ್ಕೆ ಕೇವಲ 300 ಅಂಕಗಳೊಂದಿಗೆ ಜಸ್ಟ್ ಪಾಸಾದ ಮಂಗಳೂರಿನ ವಿದ್ಯಾರ್ಥಿಯೊಬ್ಬನಿಗೆ ಆತನ ಸ್ನೇಹಿತರು ಅಭಿನಂದನಾ ಬ್ಯಾನರನ್ನೇ ಹಾಕಿ ಭರ್ಜರಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.
ನಗರದ ಪಚ್ಚನಾಡಿಯ ಹ್ಯಾಸ್ಲಿನ್ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪರೀಕ್ಷೆ ಪಾಸಾಗುತ್ತಾನೋ ಇಲ್ಲವೊ ಎಂಬ ಗೊಂದಲದಲ್ಲಿ ಆತನ ಸ್ನೇಹಿತರಿದ್ದರು. ಕೊನೆಗೆ ರಿಸಲ್ಟ್ ಬರುವಾಗ ಹ್ಯಾಸ್ಲಿನ್ ಪಾಸಾಗಿಬಿಟ್ಟಿದ್ದ. ಇದೇ ಖುಷಿಯಲ್ಲಿ ಅವನ ಸ್ನೇಹಿತರು ಪಚ್ಚನಾಡಿಯ ಮಂಗಳಾನಗರದ ರಸ್ತೆ ಬದಿಯಲ್ಲಿ ದೊಡ್ಡ ಬ್ಯಾನರನ್ನೇ ಅಳವಡಿಸಿ ಜಸ್ಟ್ ಪಾಸಾದ ಸ್ನೇಹಿತನಿಗೆ ವಿಭಿನ್ನ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬ್ಯಾನರ್ ಜಾಲತಾಣದಲ್ಲಿ ವೈರಲ್ ಆಗಿದೆ.ಮಾರ್ಕ್ಸ್ ಕಡಿಮೆಯಾಯಿತೆಂದು ಆತ್ಮಹತ್ಯೆ ಮಾಡುವ ಮಕ್ಕಳು ಇರುವಾಗ ಜಸ್ಟ್ ಪಾಸಾದರೂ ಸಂಭ್ರಮಿಸಿದ ರೀತಿ ಆತ್ಮಹತ್ಯೆ ಮಾಡಿಕೊಳ್ಳುವ ಮಕ್ಕಳಿಗೆ ಪಾಠ ಎಂದು ನೆಟ್ಟಿಗರು ಧನಾತ್ಮಕವಾಗಿ ಪ್ರತಿಕ್ರಯಿಸಿದ್ದಾರೆ .