T20 World Cup 2024: :ಮೇ 16: ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳ ಪ್ರಾಯೋಜಕತ್ವವನ್ನು ಕರ್ನಾಟಕದ ಕೆಎಂಎಫ್ ವಹಿಸಿಕೊಂಡಿದೆ. ಅದರಂತೆ, ನಂದಿನಿ ಲೋಗೋ ಇರುವ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಬುಧವಾರ ಅನಾವರಣಗೊಳಿಸಿದೆ. ಇದೇ ವೇಳೆ, ಟೂರ್ನಿಯ ವೇಳೆ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಬಗ್ಗೆಯೂ ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ಮಾಹಿತಿ ನೀಡಿದ್ದಾರೆ.
ಬುಧವಾರ ನಡೆದ ಜಂಟಿ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಲಾಯಿತು. 2024 ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳ ಪ್ರಾಯೋಜಕತ್ವ ವಹಿಸುವುದಾಗಿ ಏಪ್ರಿಲ್ 21 ರಂದು ಕೆಎಂಎಫ್ ಘೋಷಿಸಿತ್ತು. ನಂದಿನಿಯ ಲೋಗೋವನ್ನು ಸ್ಕಾಟ್ಲೆಂಡ್ ತಂಡದ ಜೆರ್ಸಿಯ ತೋಳಿನ ಭಾಗದಲ್ಲಿ ಮುದ್ರಿಸಲಾಗಿದೆ.