ಅಂಕೋಲಾ:ಮೇ 16:ಅಪ್ರಾಪ್ತ ಬಾಲಕಿಯೋರ್ವಳ ಮೇಲೆ 72 ವರ್ಷ ವಯಸ್ಸಿನ ವಯೋವೃದ್ದನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನುವ ಆರೋಪದ ಮೇಲೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ತಿಂಡಿ ಕೊಡಿಸುತ್ತೇನೆ ಎಂದು ಪುಸಲಾಯಿಸಿ, ತೋಟಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೆಗ್ಗಾರದ ಕೃಷ್ಣ ಶಿವರಾಮ ಭಟ( 72) ಎನ್ನುವವನ ಮೇಲೆ ಪ್ರಕರಣ ದಾಖಲಾಗಿದ್ದು ಆರೋಪಿತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ
ಘಟನೆ ವಿವರ..
ಮೇ 10ರಂದು ಆರೋಪಿ ಕೃಷ್ಣ ಶಿವರಾಮ ಭಟ ಈತ 10 ವರ್ಷದ ಬಾಲಕಿಯನ್ನು ತನ್ನ ತೋಟಕ್ಕೆ ಕರೆದು ಮೈ ಕೈ ಮುಟ್ಟಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸ್ ನೀರಿಕ್ಷಕ ಶ್ರೀಕಾಂತ ತೋಟಗಿ ಅವರ ಮಾರ್ಗದರ್ಶನದಲ್ಲಿ ಪಿ ಎಸ್ ಐ ಸುಹಾಸ ಆರ್ ಪ್ರಕರಣ ದಾಖಲಿಸಿದ್ದಾರೆ.