ಚಿಕ್ಕಮಗಳೂರು:ಮೇ 17:ಗುಂಡೇಟಿನಿಂದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಕೆರೆಮಕ್ಕಿ ಗ್ರಾಮದ ಯುವಕ ಸಂಜು(33) ಮೃತ ಯುವಕ.ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ ತೋಟಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಶಿಕಾರಿಗೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.ಇದು ಆಕಸ್ಮಿಕವಾಗಿ ಗುಂಡು ತಗುಲಿ ಆಗಿರುವ ಸಾವೇ ಅಥವಾ ಉದ್ದೇಶಪೂರ್ವಕವಾಗಿ ಕೊಲೆ ಮಾಡಲಾಗಿದೆಯೇ ಈ ಬಗ್ಗೆ ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮೃತ ಸಂಜು ಕೆರೆಮಕ್ಕಿ ಗ್ರಾಮದ ದಿವಂಗತ ಜೂಲೇಗೌಡ ಎಂಬುವವರ ಪುತ್ರ. ಅವಿವಾಹಿತನಾಗಿದ್ದು, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ