ಕಾರ್ಕಳ:ಮೇ 19:ಕಾರ್ಕಳ ದಿಂದ ಮಂಗಳೂರಿಗೆ ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕರ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಿಟ್ಟೆ ಭ್ರಾಮರಿ ಬಳಿ ಸಂಭವಿಸಿದೆ.
ಘಟನೆಯಲ್ಲಿ ಕಾರ್ಮಿಕರಾದ ಕೊಪ್ಪಳ ಜಿಲ್ಲೆ ಯಲಬುರ್ಗಿ ದೇವಲಾಪುರ ನಿವಾಸಿಗಳಾದ ಕರಿಯಪ್ಪ (26) ಮತ್ತು ನರಿಯಪ್ಪ (27) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಭೇಟಿ ನೀಡಿದ್ದು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.