ಕಾರ್ಕಳ: ಮೇ 20:ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು,ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಸೋಮವಾರ ಬೆಳ್ಳಂಬೆಳಗ್ಗೆ ಪಳ್ಳಿ ಗರಡಿ ಸಮೀಪ ಈ ಭೀಕರ ಅಪಘಾತ ಸಂಭವಿಸಿದ್ದು, ಕ್ರಶರ್ ನಿಂದ ಬರುತ್ತಿದ್ದ ಟಿಪ್ಪರ್ ಚಾಲಕನ ಅತೀವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಗಾಯಾಳುಗಳು ನೇಪಾಳ ಮೂಲದ ಪ್ರಸನ್ನ (26) ಹಾಗೂ ಬಚ್ಚನ್ ಡಿಸೋಜ(26) ಎಂದು ಗುರುತಿಸಲಾಗಿದೆ.ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು,ಮೃತದೇಹವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕಾರ್ಕಳ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಘಟನೆಯ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.