ಉಡುಪಿ : ಮೇ 28 : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿರುವ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿದ್ದ ನಾಲ್ವರು ನಾಯಕರಿಗೆ ಇದೀಗ ಬಿಜೆಪಿ ನೋಟಿಸ್ ನೀಡಿದೆ.
ಬಿಜೆಪಿಯ ನಾಲ್ವರು ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದು, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹೇಶ ಠಾಕೂರ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ಬಿಜೆಪಿ ಯುವ ಮೋರ್ಚ ಉಪಾಧ್ಯಕ್ಷ ರೋಶನ್ ಶೆಟ್ಟಿ ಹಾಗೂ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಇವರಿಗೆ ನೋಟಿಸ್ ನೀಡಿದೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಅಕ್ಷಮ್ಯ ಅಪರಾಧ.ಪಕ್ಷದ ಉಲ್ಲಂಘಿಸಿದ್ದಕ್ಕೆ 48 ಗಂಟೆಗಳ ಒಳಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಮುಂದೆ ಸ್ಪಷ್ಟೀಕರಣ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
ರಘುಪತಿ ಭಟ್ ಜೊತೆ ಗುರುತಿಸಿಕೊಂಡ ಬಿಜೆಪಿ ನಾಯಕರಿಗೆ ನೋಟಿಸ್ ನೀಡಲಾಗಿದೆ. ರಘುಪತಿ ಭಟ್ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ.