ಬೆಂಗಳೂರು: ಜೂನ್ 3ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ರಾಜ್ಯ ಸರ್ಕಾರ ವಿಶೇಷ ರಜೆ ಘೋಷಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಕರ್ನಾಟಕ ವಿಧಾನ ಪರಿಷತ್ ಗೆ ಈಶಾನ್ಯ – ನೈಋತ್ಯ – ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ – ನೈಋತ್ಯ – ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ ನಡೆಯಲಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ವಿಶೇಷ ರಜೆ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.