ಉಡುಪಿ: ಮೇ 31:ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯ ಜತೆ ಗುರುತಿಸಿಕೊಂಡು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾಕರ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜುನೈದ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.
ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕೆ 48 ಘಂಟೆಗಳ ಒಳಗಾಗಿ ಸ್ಪಷ್ಟೀಕರಣ ಕೋರಿದ್ದೇವು. ಇಬ್ಬರು ಸ್ಪಷ್ಟೀಕರಣ ನೀಡಿದ್ದರೂ ಸಮಂಜಸವಾಗಿಲ್ಲದೇ ಇದ್ದರಿಂದ ನಾಲ್ವರನ್ನು ಉಚ್ಚಾಟಿಸಿದ್ದೇವೆ ಎಂದು ಮಾಹಿತಿ ನೀಡಿದರು.