ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 69.50 ರೂಪಾಯಿ ಇಳಿಕೆ ಮಾಡಲಾಗಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಜೂನ್ 01) ತಿಳಿಸಿದ್ದು, ಹೊಸ ದರ ಇಂದಿನಿಂದಲೇ ಅನ್ವಯವಾಗಲಿದೆ ಎಂದು ಹೇಳಿದೆ.
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದರೂ ಕೂಡಾ ಅಡುಗೆ ಅನಿಲದ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಕಂಪನಿ ತಿಳಿಸಿದೆ.
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಬೇಕೆಂಬ ನಿರ್ಧಾರ ತೆಗೆದುಕೊಂಡ ನಂತರ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 19ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ 1,676 ರೂಪಾಯಿಗೆ ಇಳಿಕೆಯಾಗಿದೆ ಎಂದು ಎಎನ್ ಐ ವರದಿ ಮಾಡಿದೆ.
ಈ ವರ್ಷದಲ್ಲಿ ಮೂರನೇ ಬಾರಿಗೆ ಎಲ್ ಪಿಜಿ ದರ ಕಡಿತ ಮಾಡಲಾಗಿದೆ. ಈ ಮೊದಲು ಮೇ 1ರಂದು ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 19 ರೂಪಾಯಿ ಕಡಿತ ಮಾಡಲಾಗಿತ್ತು.
ಬೆಂಗಳೂರಿನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 70.50 ರೂಪಾಯಿ ಇಳಿಕೆಗೊಂಡಿದ್ದು 1,755 ರೂಪಾಯಿಗೆ ತಲುಪಿದೆ. ಇದೇ ವೇಳೆಯಲ್ಲಿ ದೇಶೀಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಹೆಚ್ಚಿನ ಬದಲಾವಣೆಯಾಗಿಲ್ಲ 14.2 KG ಸಿಲಿಂಡರ್ ಬೆಲೆ 805.50 ರೂಪಾಯಿ ನಷ್ಟಿದೆ.