ಬೆಂಗಳೂರು :ಜೂನ್ 04: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024-25 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ, ಪ್ರೌಢಶಾಲೆಗಳಿಗೆ 10 ಸಾವಿರ ಅಥಿತಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅದರಂತೆ 2024-25ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 8954 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 8954 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಈ ಕೂಡಲೇ ನೇಮಕ ಮಾಡಿಕೊಳ್ಳಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿದೆ.
ಷರತ್ತುಗಳು:-
1. ಸರ್ಕಾರಿ ಪ್ರೌಢ ಶಾಲೆಗಳಿಗೆ ಶಾಲಾವಾರು/ತಾಲ್ಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿರುತ್ತದೆ.
2. ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ನೇಮಕ ಮಾಡುವುದು.
3. ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಲು ಕ್ರಮವಹಿಸುವುದು.
4. ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 5. ಕಠಿಣ ವಿಷಯಗಳಾದ ಗಣಿತ, ವಿಜ್ಞಾನ, ಆಂಗ್ಲ ವಿಷಯದ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದ್ಯತೆ ನೀಡಲು ತಿಳಿಸಿದೆ. ನಂತರ ಇತರೆ ವಿಷಯಗಳಿಗೆ ಆದ್ಯತೆ ನೀಡುವುದು.
ಸದರಿ ವಿಷಯಗಳಿಗೆ ಹೆಚ್ಚುವರಿ ಶಿಕ್ಷಕರು ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತಿಲ್ಲ. 6. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು
ಸ್ಥಳನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ.
ತಾಲ್ಲೂಕಿನಲ್ಲಿ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡುವುದು.
7. ಅತಿಥಿ ಶಿಕ್ಷಕರನ್ನು ಅತೀ ಹೆಚ್ಚು ಮಕ್ಕಳಿರುವ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಪ್ರೌಢ ಶಾಲೆಗಳಿಗೆ ಆದ್ಯತೆ ಮೇರೆಗೆ ಒದಗಿಸುವುದು.
8. ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯಾವಶ್ಯಕ ಖಾಲಿ ಹುದ್ದೆಗಳಿಗೆ ಆದ್ಯತೆ ಮೇರೆಗೆ ನೇಮಿಸುವುದು.
9. ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡತಕ್ಕದ್ದು ಎಂದು ಸೂಚನೆ ನೀಡಲಾಗಿದೆ.