ಉಡುಪಿ:ಜೂನ್ 06:ಎಂ. ಜಿ. ಎಂ. ಕಾಲೇಜಿನ ಯಕ್ಷಗಾನ ಮತ್ತು ನಾಟಕ ಸಂಘ ಯಕ್ಷಗಾನ ಕೇಂದ್ರ ಇಂದ್ರಾಳಿ ಸಹಯೋಗದಲ್ಲಿ ಹಿಂದಿನ ಮತ್ತು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಆಯೋಜಿಸಿದ ಯಕ್ಷಗಾನ ಸರ್ಟಿಫಿಕೇಟ್ ಕೊರ್ಸ್ ನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ಮಾಹೆ ಮಣಿಪಾಲದ ಸಹಕುಲಾಧಿಪತಿ ಹೆಚ್. ಎಸ್. ಬಲ್ಲಾಳ್ ಕಾಲೇಜು ವಾರ್ಷಿಕೋತ್ಸವ ಸಂದರ್ಭದಲ್ಲಿ ವಿತರಿಸಿದರು.
ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನ ಮ್ಯಾನೇಜಿಂಗ್ ಟ್ರಸ್ಟಿ ಪ್ರಕಾಶ್ಚಂದ್ರ ಶೆಟ್ಟಿ ಕಾಲೇಜು ಪ್ರಾಂಶುಪಾಲ ಪ್ರೊ. ಲಕ್ಷ್ಮೀ ನಾರಾಯಣ ಕಾರಂತ ಪಿ. ಯು. ಕಾಲೇಜು ಪ್ರಾಂಶುಪಾಲೆ ಮಾಲತಿ ದೇವಿ ಕನ್ನಡ ವಿಭಾಗ ಮುಖ್ಯಸ್ಥ ಡಾ. ಪುತ್ತಿ ವಸಂತ ಕುಮಾರ್ ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಯಕ್ಷಗಾನ ಮತ್ತು ನಾಟಕ ಸಂಘದ ಸಂಚಾಲಕ ರಾಘವೇಂದ್ರ ತುಂಗ ಉಪಸ್ಥಿತರಿದ್ದರು.