ಉಡುಪಿ:ಜೂನ್ 05:ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯ ಪ್ರಜ್ಞೆ ಯಿಂದ ಮಕ್ಕಳು ಸೇಫ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಅವರನ್ನು ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬ್ರಹ್ಮಾವರದ ಖಾಸಗಿ ಶಾಲೆಯಿಂದ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್, ಘಟನೆಯಿಂದ ಕೆಲವು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.