ಉಡುಪಿ :ಜೂನ್ 08:ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್ ಟ್ರಕ್ ಢಿಕ್ಕಿ ಹೊಡೆದ ಘಟನೆ ಉದ್ಯಾವರದಲ್ಲಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ಸರಕು ಸಾಗಣೆ ಟ್ರಕ್ ನ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಂತ್ರಿಕ ಸಮಸ್ಯೆಯಿಂದ ಲಾರಿ ರಾಷ್ಟ್ರೀಯ ಹೆದ್ದಾರಿ ಮಧ್ಯೆ ನಿಂತಿತ್ತು. ಗೂಡ್ಸ್ ಟ್ರಕ್‌ನ ಚಾಲಕ, ಮುಂದೆ ನಿಂತಿದ್ದ ಲಾರಿಯನ್ನು ಗಮನಿಸದೆ, ಹಿಂದಿನಿಂದ ಅದಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.