ಕುಂದಾಪುರ:ಜೂನ್ 08: ಸರಕಾರಿ ಆಸ್ಪತ್ರೆ ವೈದ್ಯೆಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿ ವೈದ್ಯಾಧಿಕಾರಿ ಗುಜರಾತಿನಲ್ಲಿ ಬಂಧನ..!!
ಕುಂದಾಪುರ : ಜೂನ್ 08: ವೈದ್ಯೆಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ, ಕುಂದಾಪುರ ಸರ್ಕಾರೀ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ರೆಬೆಲ್ಲೋ ಅವರನ್ನು ಪೊಲೀಸರು ಗುಜರಾತಿನ ಲಾಡ್ಜ್ ಒಂದರಲ್ಲಿ ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಮೊಬೈಲ್ ಇಂಟರ್ನೆಟ್ ನೆಟ್ ವರ್ಕ್ ಆಧರಿಸಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗುಜರಾತಿ ನಿಂದ ಆರೋಪಿಯನ್ನು ಪೊಲೀಸರು ರೈಲಿನಲ್ಲಿ ಕರೆತಂದಿದ್ದು ಶುಕ್ರವಾರ ರಾತ್ರಿ 10:00 ಸುಮಾರಿಗೆ ಕುಂದಾಪುರಕ್ಕೆ ಆಗಮಿಸಿದ್ದಾರೆ
ಪ್ರಕರಣದ ಬಗ್ಗೆ ಆರೋಪಿಯ ವಿಚಾರಣೆ ನಡೆಸುತ್ತಿರುವ ಪೊಲೀಸರು ಮುಂದಿನ ಕ್ರಮಕ್ಕೆ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.