ಉಡುಪಿ , ಜೂನ್. 12: ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ .ಮಲ್ಪೆ ಸಮುದ್ರ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿರುತ್ತದೆ.
ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಮಲ್ಪೆ ಬೀಚ್‌ನಲ್ಲಿ ಯಾವುದೇ ಅಪಾಯ ಸಂಭವಿಸದಂತೆ ತಡೆಯಲು ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ಸದ್ಯಕ್ಕೆ ತಡೆ ಬೇಲಿ ನಿರ್ಮಿಸಲಾಗಿದೆ.
ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಂಡಿವೆ.
ತಡೆ ಬೇಲಿ ಹಾಕುವ ಜೊತೆಗೆ ಅಲ್ಲಲ್ಲಿ ಜೊತೆಗೆ ಎಚ್ಚರಿಕೆಯ ಕೆಂಪು ಬಾವುಟಗಳನ್ನು ಹಾಕಲಾಗಿದೆ. ಜೊತೆಗೆ ಪ್ರವಾಸಿಗರು ಹೆಚ್ಚಾಗಿ ಓಡಾಡುವ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧ ಎಂಬ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಲಾಗಿದೆ.ಏನಾದರೂ ಪ್ರವಾಸಿಗರು ಬೀಚ್‌ಗೆ ಕಾಲಿಟ್ಟರೆ ಅವರಿಗಾಗಿ ಜೀವ ರಕ್ಷಕ ಪಡೆಯ ಸದಸ್ಯರು ಬೀಚ್‌ನಲ್ಲಿ ಕಾವಲು ಕಾಯುತ್ತಿದ್ದಾರೆ.