ಉಡುಪಿ :ಜೂನ್ 14:ಅಂಬಾಗಿಲು ಮೀನು ಮಾರುಕಟ್ಟೆ ಬಳಿ ಭಟ್ಕಳದಿಂದ ಮಂಗಳೂರಿನತ್ತ ಅತೀ ವೇಗದಿಂದ ತೆರಳುತ್ತಿದ್ದ ಕಾರು ಪಲ್ಟಿಯಾಗಿ ಬಿದ್ದ ಘಟನೆ ಜೂ.13ರ ಗುರುವಾರ ತಡರಾತ್ರಿ ನಡೆದಿದೆ.
ಕಾರು ಅಂಬಾಗಿಲು ಸಮೀಪ ಆಗಮಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.
ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಸದ್ಯಕ್ಕೆ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ . ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.