ಬೆಂಗಳೂರು : ಜೂನ್ 14:ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 400 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ
ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್ 14ರಿಂದ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನಾಂಕ ಜೂನ್ 24 ಆಗಿರುತ್ತದೆ
ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್ ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ಪಶುವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿ.ವಿ.ಎಸ್.ಸಿ. / ಬಿ.ವಿ.ಎಸ್.ಸಿ ಆಯಂಡ್ ಎಎಚ್ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಪ್ರವರ್ಗ 2 ಎ, 2 ಬಿ, ಪ್ರವರ್ಗ 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52,640 ರೂ. ಮಾಸಿಕ ವೇತನ ದೊರೆಯಲಿದೆ.
AHVS Karnataka Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (ahvs.karnataka.gov.in).
ಹೆಸರು, ಫೋನ್ ನಂಬರ್ ನೀಡಿ ನಿಮ್ಮ ಹೆಸರು ನೋಂದಾಯಿಸಿ.
ಲಾಗಿನ್ ಆಗಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
ಅಗತ್ಯ ದಾಖಲೆ, ಫೋಟೊಗಳನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್ ಮಾಡಿ.
ಭರ್ತಿ ಮಾಡಿದ ಮಾಹಿತಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ನೇಮಕಾತಿ ಗುತ್ತಿಗೆ ಆಧಾರದಲ್ಲಿ ನಡೆಯುತ್ತಿದ್ದು, ತಾತ್ಕಾಲಿಕವಾಗಿರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸವಾಗಿರಬೇಕು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಮಾಸಿಕ ವೇತನಕ್ಕಿಂತ ಹೊರತುಪಡಿಸಿ ಬೇರೆ ಭತ್ಯೆ ನೀಡಲಾಗುವುದಿಲ್ಲ.
ನಿಯುಕ್ತಿಗೊಳಿಸುವ ಸ್ಥಳದಲ್ಲಿಯೇ ಅಭ್ಯರ್ಥಿಗಳು ಕರ್ತವ್ಯ ನಿರ್ವಹಿಸಬೇಕು.
ಉದ್ಯೋಗ ತ್ಯಜಿಸುವುದಿದ್ದರೆ 1 ತಿಂಗಳು ಮುಂಚಿತವಾಗಿಯೇ ತಿಳಿಸಬೇಕು.
ಅಭ್ಯರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಬದ್ಧರಾಗಿರಬೇಕು.
ಹೆಚ್ಚಿನ ಮಾಹಿತಿಗೆ, ದೂರವಾಣಿ ಸಂಖ್ಯೆ 080-23414446ಕ್ಕೆ ಸಂಪರ್ಕಿಸಿ