ಮಣಿಪಾಲ:ಜೂನ್ 15:ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಜೂ. 14ರ ಶುಕ್ರವಾರ ತಡರಾತ್ರಿ ನಡೆದಿದೆ.
ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಅಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಎದುರಿನಿಂದ ಆಗಮಿಸುತ್ತಿದ್ದ ದ್ವಿಚಕ್ರ ವಾಹನವೂ ಮಗುಚಿ ಬಿದ್ದಿದ್ದು ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮಣಿಪಾಲ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.