ಉಡುಪಿ: ಜೂನ್ 16: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಸೇರ್ಪಡೆಗೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ sw.kar.nic.in ನಲ್ಲಿ ಪೂರ್ಣ ದಾಖಲಾತಿಗಳೊಂದಿಗೆ ಅನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ, ಕಾರ್ಕಳ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.