ಉಡುಪಿ, ಜೂ.18: ಉಡುಪಿಯ ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಚೇರ್ಕಾಡಿ ವಿಜಯ ಹೆಗ್ಡೆ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.
ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು , ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಚುನಾವಣಾ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಮೃತರು ಪತ್ನಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.